header ads

SBI ಬೃಹತ್ ನೇಮಕಾತಿ 2020 - 2000 ಹುದ್ದೆಗಳು

 SBI ಬೃಹತ್ ನೇಮಕಾತಿ 2020 - 2000 ಹುದ್ದೆಗಳು



  ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI ) ದಲ್ಲಿ ಖಾಲಿ ಇರುವ 2000 ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದ್ದಾರೆ.ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
     ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 4,2020.

ವಿದ್ಯಾರ್ಹತೆ

     ಪಿ.ಓ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಮುಗಿಸಬೇಕು.ಪದವಿ ಮುಗಿದವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವೇತನ

      ವೇತನ ಶ್ರೇಣಿಯು ತಿಂಗಳಿಗೆ 27,620ರೂ ಇಂದ 42,020 ರೂ.ಇದರ ಜೊತೆಜೊತೆಗೆ ಡಿಎ,ಎಚ್ ಆರ್ ಎ,ಗುತ್ತಿಗೆ ಬಾಡಿಗೆ,ಸಿಸಿಎ,ವೈದ್ಯಕೀಯ ಮತ್ತು ಇತರ ಭತ್ಯೆಗಳು ಸಿಗಲಿದೆ.

ವಯೋಮಿತಿ

      ಏಪ್ರಿಲ್ 1,2020 ರ ಅನ್ವಯ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

      ವಯೋಮಿತಿಯ ಸಡಿಲಿಕೆ

• SC/ST ಅಭ್ಯರ್ಥಿಗಳಿಗೆ 5 ವರ್ಷ
• OBC ಅಭ್ಯರ್ಥಿಗಳಿಗೆ 3 ವರ್ಷ
• ಅಂಗವಿಕಲ ( SC/ST ) ಅಭ್ಯರ್ಥಿಗಳಿಗೆ 12 ವರ್ಷ
• ಅಂಗವಿಕಲ ( ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳಿಗೆ 10 ವರ್ಷಗಳು.

ಅರ್ಜಿ ಶುಲ್ಕ

    ಸಾಮಾನ್ಯ / ಆರ್ಥಿಕವಾಗಿ ಹಿಂದುಳಿದ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ರೂ.750 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.SC/ST ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ

       ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ ,ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ
       ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು SBIನ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ಕೊಡಿ.