header ads

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ 2021

 ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ 2021



ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಬೆಳರಚ್ಚುಗಾರ,ಬೆರಳಚ್ಚು ನಕಲುಗಾರ,ಜಾರಿಕಾರ ಹುದ್ದೆಗಳ ನೇಮಕಾತಿಗೆ  ಅರ್ಜಿ ಆಹ್ವಾನಿಸಲಾಗಿದೆ.ಈ ಹಿಂದೆ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.ಆದರೆ ಕೊರೋನಾ ವೈರಸ್ ನ ಕಾರಣದಿಂದಾಗಿ ನೇಮಕಾತಿ ಪ್ರಕ್ರಿಯೆ ಆಗ ಸ್ಥಗಿತಗೊಳಿಸಲಾಗಿತ್ತು.ಈಗ ನೇಮಕಾತಿ ಪ್ರಕ್ರಿಯೆ ಪುನರಾರಂಭಿಲಾಗಿದೆ.

        ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಮತ್ತು ಶುಲ್ಕವನ್ನು ಪಾವತಿಸುವ ಅಗತ್ಯ ಇರುವುದಿಲ್ಲ.ಮೊದಲು ಸಲ್ಲಿಸಿದ ಅರ್ಜಿ ಮತ್ತು ಅರ್ಜಿಶುಲ್ಕವನ್ನು ಪರಿಗಣಿಸಲಾಗುತ್ತದೆ.ಈ ಮೇಲಿನಂತೆ ತಿಳಿಸಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24.03.2021 ಆಗಿರುತ್ತದೆ.

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2023 


 ಹುದ್ದೆಗಳ ವಿವರ

- ಬೆರಳಚ್ಚು ಗಾರ - 7 ಹುದ್ದೆಗಳು 

- ಬೆರಳಚ್ಚು ನಕಲುಗಾರ - 3 ಹುದ್ದೆಗಳು 

- ಜಾರಿಕಾರ - 11 ಹುದ್ದೆಗಳು


ವಿದ್ಯಾರ್ಹತೆ 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  10 ನೇ ತರಗತಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು ಇದರ ಜೊತೆಗೆ ಕನ್ನಡ ಮತ್ತು  ಆಂಗ್ಲ ಭಾಷೆ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜಾರಿಕಾರ ಹುದ್ದೆಗೆ 10 ನೇ ತರಗತಿ ಅಥವಾ ತತ್ಸಮಾನ.ಮತ್ತು ವಾಹನಾ ಚಾಲನಾ ಪರವಾನಿಗೆ ಹೊಂದಿರಬೇಕು.


ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು.ನಿಯಮಾನುಸಾರ ಜಾತಿವಾರು ಮೀಸಲಾತಿ ಅನ್ವಯಿಸುತ್ತದೆ.


ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ.ಗಳು

ಪ.ಜಾತಿ,ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.ಗಳು


ಬಹುಮುಖ್ಯ ದಿನಾಂಕಗಳು 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 23.02.2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24.03.2021

ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಲು ಕೊನೆಯ ದಿನಾಂಕ 18.04.2021

ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ 21.04.2021

                Download Notification 

ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಸೇರಿರಿ