header ads

dcc bank requirement 2023 । ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನೇಮಕಾತಿ 2023

 ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ 
ನೇಮಕಾತಿ 2023 
      
dcc bank requirement 2023

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ,ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಒಟ್ಟು ಹುದ್ದೆಗಳು :

 96


ಹುದ್ದೆಗಳ ವಿವಿರ 

ಶಾಖಾ ವ್ಯವಸ್ಥಾಪಕರು  4 ಹುದ್ದೆಗಳು

ಹಿರಿಯ ಸಹಾಯಕರು    19 ಹುದ್ದೆಗಳು

ಶೀಘ್ರಲಿಪಿಗಾರರು         1 ಹುದ್ದೆ

ಕಿರಿಯ ಸಹಾಯಕರು     43 ಹುದ್ದೆಗಳು

ಕಂಪ್ಯೂಟರ್ ಆಪರೇಟರ್  2  ಹುದ್ದೆಗಳು 

ವಾಹನ ಚಾಲಕರು          4 ಹುದ್ದೆಗಳು 

ನಾಲ್ಕನೇ ದರ್ಜೆ ನೌಕರರು  23 ಹುದ್ದೆಗಳು 


ವಿದ್ಯಾರ್ಹತೆ 

ಶಾಖಾ ವ್ಯವಸ್ಥಾಪಕರು & ಹಿರಿಯ ಸಹಾಯಕರು 

ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು.

ಶೀಘ್ರಲಿಪಿಗಾರರು

ಅಭ್ಯರ್ಥಿಗಳು ದ್ವಿತೀಯ ಪರೀಕ್ಷೆಯಲ್ಲಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣರಾಗಿರಬೇಕು.ಸೀನಿಯರ್ ಕನ್ನಡ ಮತ್ತು ಇಂಗ್ಲೀಷ್ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು.

ಕಿರಿಯ ಸಹಾಯಕರು

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕಂಪ್ಯೂಟರ್ ಆಪರೇಟರ್ 

  ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣರಾಗಿರಬೇಕು.ಸೀನಿಯರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ನಲ್ಲಿ ಉತ್ತೀರ್ಣರಾಗಿರಬೇಕು.


ವಾಹನ ಚಾಲಕರು 

 ಈ ಮೇಲಿನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಪಾಸಾಗಿರಬೇಕು. ಲಘು ಮತ್ತು ಭಾರಿ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.


ನಾಲ್ಕನೇ ದರ್ಜೆ ನೌಕರರು 

ಈ ಹುದ್ದೆಗೆ ಅಭ್ಯರ್ಥಿಗಳು ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದೆ.



ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

•ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು 

•2ಎ,2ಬಿ,3ಎ,3ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು 

•ಪ.ಜಾತಿ,ಪ.ಪಂಗಡ,ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು 


ವೇತನ 

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ಮಾಸಿಕ ವೇತನ ರೂ.23,500 ರಿಂದ ರೂ.70850 ಆಗಿರುತ್ತದೆ


ಅರ್ಜಿ ಶುಲ್ಕ 

ಸಾಮಾನ್ಯ ವರ್ಗ,ಪ್ರವರ್ಗ 2ಎ,2ಬಿ,3ಎ,3ಬಿ ವರ್ಗದ ಅಭ್ಯರ್ಥಿಗಳಿಗೆ - ರೂ 1500

ಪ.ಜಾತಿ,ಪ.ಪಂಗಡ,ಪ್ರವರ್ಗ-1 ಮತ್ತು ಅಂಗವಿಕಲ,ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.750 ನಿಗದಿಪಡಿಸಲಾಗಿದೆ.

( ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದಾಗಿದೆ)


ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ - ಜನವರಿ 30,2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - ಫೆಬ್ರವರಿ 28,2023

ಶುಲ್ಕ ಪಾವತಿಸಲು ಕೊನೆಯ ದಿನಾಂಕ - ಫೆಬ್ರವರಿ 28,2023